ನವದೆಹಲಿ: ಭಾರತ-ಪಾಕ್ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಎದುರಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ ಎಂಟು ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇವರು ಏನು ಮಾತನಾಡಲಿದ್ದಾರೆ ಎಂಬ ವಿಚಾರದ ಬಗ್ಗೆ ಕುತೂಹಲ ಹೆಚ್ಚಾಗಿದೆ.
ದಾಳಿ ಪ್ರತಿದಾಳಿಗಳು ನಡೆದ ನಂತರ ಅಥವಾ ಇಲ್ಲಿಯವರೆಗೂ ಯಾವುದೇ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಮೋದಿ ಅವರು ಸಾರ್ವಜನಿಕವಾಗಿ ಎಲ್ಲೂ ಮಾತನಾಡಿಲ್ಲ. ಹೀಗಾಗಿ ಇಂದು ದಿಢೀರ್ ಏನು ಹೇಳಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ.
ಪಹಲ್ಗಾಮ್ ನಲ್ಲಿ ನಡೆದ ದಾಳಿಯ ಬಳಿಕ ಮೃತಪಟ್ಟವರ ಬಲಿದಾನವನ್ನು ವ್ಯರ್ಥವಾಗಲು ಬಿಡುವುದಿಲ್ಲ ಎಂಬ ಕಟು ಹೇಳಿಕೆ ನೀಡಿದ್ದರು. ಒಬ್ಬೊಬ್ಬ ಉಗ್ರನನ್ನೂ ಆತ ಎಲ್ಲಿ ಅವಿತು ಕೂತಿದ್ದರೂ ಹುಡುಕಿ ಹೊಡೆಯಲಿದ್ದೇವೆ ಎಂದು ಎಚ್ಚರಿಸಿದರು. ಇಂದು ನಡೆಯುವ ಭಾಷಣದಲ್ಲಿ ಏನಂತಾರೆ ಎಂಬುವುದು ಯಕ್ಷ ಪ್ರಶ್ನೆಯಾಗಿದೆ.

