ಉಡುಪಿ: ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಅವಿಭಜಿತ ದ.ಕ ಜಿಲ್ಲಾ ಪರಿಷತ್ತಿನ ಮಾಜಿ ಉಪಾಧ್ಯಕ್ಷೆ ಲೀನಾ ಮಥಾಯಸ್ ಅವರು ಸಾವನ್ನಪ್ಪಿದ್ದಾರೆ.
ಉಡುಪಿಯ ಶಿರ್ವ ನಿವಾಸಿಯಾಗಿದ್ದ ಅವರು ರಸ್ತೆ ಬದಿಯಲ್ಲಿ ನಿಂತಿದ್ದಾಗ ಕಾರು ಢಿಕ್ಕಿ ಹೊಡೆದಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಇವರು ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. ಶಿರ್ವ ಗ್ರಾ.ಪಂ ಸದಸ್ಯರಾಗುವ ಮುಖೇನ ಇವರು ರಾಜಕೀಯಕ್ಕೆ ಪ್ರವೇಶ ನೀಡಿದ್ದರು.

