ಕೋಟ : ಟಿಟಿ ವಾಹನವೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ಸಾಸ್ತಾನ ಟೋಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ರವೀಂದ್ರ ಎಂದು ಗುರುತಿಸಲಾಗಿದೆ.
ಉಡುಪಿಯಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಟಿಟಿ ವಾಹನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ರವೀಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

