ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದೆ. ಈ ಸಂದರ್ಭ ಭದ್ರತಾ ಪಡೆಗಳು ಮೂವರು ಜೈಶ್ ಉಗ್ರರನ್ನು ಹತ್ಯೆ ಮಾಡಿದ್ದಾರೆ ಎಂದು ಹಿರಿಯ ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪುಲ್ವಾಮಾದ ಅವಂತಿಪೋರಾದ ನಾಡರ್ ಮತ್ತು ಟ್ರಾಲ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ನಡೆದ ದಾಳಿಯಲ್ಲಿ ಭಾರತೀಯ ಸೇನೆ ಜೈಶ್ ಎ ಮೊಹಮ್ಮದ್ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು. ಭಯೋತ್ಪಾದಕರು ಪ್ರತಿದಾಳಿ ನಡೆಸಿದ್ದರು.

