ಮಂಗಳೂರು: ದ.ಕ ಜಿಲ್ಲಾ ನೂತನ ಜಿಲ್ಲಾಧಿಕಾರಿ ಸಂಕೀರ್ಣ `ಪ್ರಜಾಸೌಧ’ವನ್ನು ಇಂದು ಮಧ್ಯಾಹ್ನ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ.
ಕರ್ನಾಟಕ ಗೃಹ ಮಂಡಳಿ, ದ.ಕ ಜಿಲ್ಲಾಡಳಿತ ಮತ್ತು ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್ ನಲ್ಲಿ ಸುಮಾರು ಎಪ್ಪತ್ತೈದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮೂರು ಮಹಡಿ ಸಂಕೀರ್ಣ ಇಂದು ಉದ್ಘಾಟನೆಗೊಳ್ಳಲಿದೆ. ಇಲ್ಲಿ ಒಟ್ಟು ಇಪ್ಪತ್ತಮೂರು ಇಲಾಖೆಗಳ ಕಾರ್ಯಾಚರಣೆ ಆರಂಭವಾಗಲಿದೆ.
ಒಂಭತ್ತು ವರ್ಷಗಳಲ್ಲಿ ಕಾಮಗಾರಿ ಸಂಪೂರ್ಣಗೊಂಡಿದೆ. ಮೂರು ಮಹಡಿಯಲ್ಲೂ ಲಿಫ್ಟ್, ಶೌಚಾಲಯ ಮತ್ತು ಅಂಗವಿಕಲರಿಗೆ ಪ್ರತ್ಯೇಕ ವ್ಯವಸ್ಥೆಯಿದೆ. ಬೃಹತ್ತಾದ ಆಡಿಟೋರಿಯಂ ಕಾಮಗಾರಿ ಇನ್ನಷ್ಟೇ ಪೂರ್ಣಗೊಳ್ಳಬೇಕಿದೆ.

