ಸುಳ್ಯ: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿದ ರೀತಿಯಲ್ಲೇ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆಯ ಕೋಲ ನಡೆದಿದೆ.
ಈ ಮೊದಲು ಬಿಜೆಪಿ ಜಯನಗರ ಸಮಿತಿ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವಂತೆ ಹರಕೆ ಹೇಳಿಕೊಂಡಿದ್ದರು. ಅದೇ ರೀತಿ ಇದೀಗ ಸುಳ್ಯ ಜಯನಗರದ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ ಶ್ರೀ ಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ವಿಶೇಷ ಹರಕೆಯ ಅಜ್ಜನ ನೇಮ ಮತ್ತು ಪರಿವಾರ ದೈವಗಳ ತಂಬಿಲ ಸೇವೆ ನಡೆಯಿತು.
ಈ ಕೋಲದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಶಾಸಕಿ ಭಾಗೀರಥಿ ಮುರುಳ್ಯ, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ಇತರ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಕೊರಗಜ್ಜ ದೈವದ ಪ್ರಸಾದ ಪ್ರಧಾನಿ ನರೇಂದ್ರ ಮೋದಿಗೂ ತಲುಪಲಿದೆ ಎಂಬ ಮಾಹಿತಿ ಸಿಕ್ಕಿದೆ.

