ವಾಷಿಂಗ್ಟನ್: ಅಮೇರಿಕಾದಲ್ಲಿ ಬಿರುಗಾಳಿಯ ಅಬ್ಬರಕ್ಕೆ ಕಟ್ಟಡಗಳು ನೆಲಸಮವಾಗಿದ್ದು ಅಲ್ಲದೆ ಮೂವತ್ತೈದಕ್ಕೂ ಅಧಿಕ ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಸೇಂಟ್ ಲೂಯಿಸ್, ಮಿಸೌರಿ, ಕೆಂಟುಕಿ ಮತ್ತು ವರ್ಜೀನಿಯಾದಲ್ಲಿ ಬಿರುಗಾಳಿಗೆ ಅಪಾರ ಹಾನಿಯಾಗಿದೆ ಎಂದು ವರದಿಯಾಗಿದೆ.
ಹವಾಮಾನ ವೈಪರೀತ್ಯದಿಂದ ಶುಕ್ರವಾರವೇ ಶುರುವಾದ ಬಿರುಗಾಳಿಗೆ ಐದು ಸಾವಿರಕ್ಕೂ ಹೆಚ್ಚು ಕಟ್ಟಡಗಳು ನೆಲಸಮಗೊಂಡಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಲೇ ಇದೆ.
ಮಧ್ಯ ಅಟ್ಲಾಂಟಿಕದಲ್ಲಿ ಸಂಭವಿಸಿದ ಚಂಡಮಾರುತದ ಪರಿಣಾಮವಾಗಿ ಬಿರುಗಾಳಿ ಎದ್ದಿದೆ ಎಂದು ಹೇಳಲಾಗುತ್ತಿದೆ. ಲಕ್ಷಾಂತರ ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕೂಡಾ ಕಡಿತಗೊಂಡಿದೆ.

