ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಕಾಲೇಜು ಬಸ್ಸಿಗೆ ಇದ್ದಕಿದ್ದಂತೆ ಹಿಂದಿನಿಂದ ಬಂದ ಖಾಸಗಿ ಬಸ್ ಢಿಕ್ಕಿಯಾಗಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರಿನ ಬಲ್ಮಠದಲ್ಲಿ ನಡೆದಿದೆ.
ರಸ್ತೆ ಬದಿ ಬಲ್ಮಠದ ಖಾಸಗಿ ನರ್ಸಿಂಗ್ ಕಾಲೇಜು ಬಸ್ ನಿಂತಿತ್ತು. ಇದ್ದಕಿದ್ದಂತೆ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಹಿಂದಿನಿಂದ ಬಂದು ಢಿಕ್ಕಿ ಹೊಡೆದಿದೆ.
ವೇಗದ ಚಾಲನೆಯಿಂದ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕೆಲವು ವಿದ್ಯಾರ್ಥಿಗಳು ಘಟನೆಯಿಂದ ಗಾಯಗೊಂಡಿದ್ದಾರೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

