ಉಡುಪಿ: ರಾಜ್ಯದಲ್ಲಿ ಪ್ರಥಮ ಬಾರಿಗೆ ನೀಡಲಾಗುತ್ತಿರುವಂತಹ 2024-25ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸಾ ಪದಕಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸರು ಆಯ್ಕೆಯಾಗಿದ್ದಾರೆ. ಇದು ಉಡುಪಿ ಜಿಲ್ಲೆಗೆ ಕೀರ್ತಿ ತರುವ ವಿಚಾರವಾಗಿದೆ.
ಮೇ. 21ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಮಲ್ಪೆ ಕರಾವಳಿ ಕಾವಲು ಪೊಲೀಸ್ ಪಡೆಯ ಎಸ್ಐ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಗುರುದಾಸ್ ಮತ್ತು ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್ಮ್ಡ್ ಹೆಡ್ ಕಾನ್ಸ್ಟೇಬಲ್ ಸಂತೋಷ್ ಪದಕವನ್ನು ಸ್ವೀಕರಿಸಲಿದ್ದಾರೆ.
ಸಮಾರಂಭದಲ್ಲಿ ಅಧಿಕೃತವಾಗಿ ಪ್ರದಾನ ಮಾಡಲಾಗುವ ಈ ಪದಕಕ್ಕೆ ಆಯ್ಕೆಯಾದ ಜಿಲ್ಲಾ ಪೊಲೀಸ್ ಸಿಬ್ಬಂದಿಗೆ ಠಾಣಾ ಇತರ ಪೊಲೀಸರು ಅಭಿನಂದನೆ ಸಲ್ಲಿಸಿದ್ದಾರೆ.


