ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮೇ.23 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದ್ರಾಬಾದ್ ನಡುವಿನ ಪಂದ್ಯವನ್ನು ಲಕ್ನೋ ಗೆ ಸ್ಥಳಾಂತರ ಮಾಡಲಾಗಿದೆ.
ಮುಂದಿನ 2-3 ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಪಂದ್ಯವನ್ನು ಲಕ್ನೋ ಗೆ ಸ್ಥಳಾಂತರ ಮಾಡುವುದಾಗಿ ಐಪಿಎಲ್ ಗವರ್ನಿಂಗ್ ಕೌನ್ಸಿಲ್ ನಿರ್ಧರಿಸಿದೆ.
ಈ ಬಗ್ಗೆ ಮಾಹಿತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

