ಬೆಂಗಳೂರು: ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಗೆ ನೂತನ ಪ್ರಭಾರ ಮಹಾನಿರ್ದೇಶಕರಾಗಿ ಕನ್ನಡಿಗರಾದ ಐಪಿಎಸ್ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ನೇಮಕ ಮಾಡಲಾಗಿದೆ.
ಹಾಲಿ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿಯಾಗಿರುವ ಹಿನ್ನೆಲೆ ಸಲೀಂ ಅವರು ಪ್ರಭಾರ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಈ ಹಿಂದೆ ಕ್ರಿಮಿನಲ್ ಇನ್ವೆಸ್ಟಿಗೇಶನ್ ಇಲಾಖೆಯ ಡಿಜಿಪಿಯಾಗಿ ಸೇವೆ ಸಲ್ಲಿಸಿ ದಕ್ಷ ಅಧಿಕಾರಿ ಎಂದು ಗುರುತಿಸಿಕೊಂಡಿದ್ದರು.
ಡಾ. ಸಲೀಂ ಅವರು ಕರ್ನಾಟಕದವರೇ ಆಗಿದ್ದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ, ರಾಜ್ಯ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿ ಕೂಡಾ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಗೆ ಓರ್ವ ಕಾರ್ಯಕ್ಷಮತೆ ಮೆರೆದಿರುವ ಅಧಿಕಾರಿಯನ್ನು ನೇಮಕ ಮಾಡಿದಕ್ಕೆ ವ್ಯಾಪಕ ಮೆಚ್ಚುಗೆ ಕೂಡಾ ವ್ಯಕ್ತವಾಗಿದೆ.

