ಮಂದಾರ್ತಿ: ಕೆಲಸಕ್ಕೆಂದು ಹೋದ ಯುವಕ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಮಂದಾರ್ತಿಯ ನಡೂರು ಗ್ರಾಮದಲ್ಲಿ ನಡೆದಿದೆ. 30 ವರ್ಷದ ಗಿರೀಶ್ ನಾಪತ್ತೆಯಾದ ಯುವಕ.
ಇವರು ಮೇರಂದು ಬೆಳಿಗ್ಗೆ 8 ಗಂಟೆಗೆ ಕೂಲಿ ಕೆಲಸದ ನಿಮಿತ್ತ ಮನೆಯಿಂದ ಹೋದವರು ಇದುವರೆಗೆ ಮನೆಗೆ ಬಾರದೆ ಕಾಣೆಯಾಗಿದ್ದಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಥವಾ ಗುರುತು ಪತ್ತೆಯಾದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಾಗಿ ಕೋರಲಾಗಿದೆ.


