ಮಂಗಳೂರು: ಮಂಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ವಾಮಂಜೂರು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಪರಿಶೀಲನೆ ವೇಳೆ ಆಡಳಿತದಲ್ಲಿ ಅನೇಕ ಲೋಪದೋಷಗಳು ಕಂಡುಬಂದಿದ್ದು ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃಗಾಲಯದಿಂದ ಹೆಚ್ಚಿನ ಹಣ ಬರುತ್ತಿದ್ರೂ ಪ್ರಾಧಿಕಾರವು ಅಭಿವೃದ್ಧಿಗೆ ಹಣ ಖರ್ಚು ಮಾಡುತ್ತಿರೋದು ಕಂಡುಬರುತ್ತಿಲ್ಲ. ಸಿಬ್ಬಂದಿಗೂ ಕಡಿಮೆ ವೇತನ ನೀಡುತ್ತಿದ್ದಾರೆ.
ಟೆಂಡರ್ ಪ್ರಕ್ರಿಯೆಯಲ್ಲಿ ಕೂಡಾ ಲೋಪ ಕಂಡುಬರುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

