ಹಿರಿಯಡಕ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಢಿಕ್ಕಿ ಹೊಡೆದು ಕಾಲು ಮತ್ತು ತಲೆಗೆ ಗಂಭೀರವಾದ ಏಟು ಬಿದ್ದ ಘಟನೆ ಹಿರಿಯಡಕ ಸಮೀಪದ ಕೊಟ್ಣಕಟ್ಟೆಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಎಲೆಕ್ಟ್ರಿಷಿಯನ್ ವೃತ್ತಿಯ ರವಿ (68) ಗಾಯಗೊಂಡವರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

