ಉಡುಪಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಮೇ 26ರ ಸೋಮವಾರ ರಜೆ ಘೋಷಿಸಲಾಗಿದೆ.
ತೀವ್ರ ಗಾಳಿ- ಮಳೆ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಆದೇಶಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಗಾಳಿ-ಮಳೆ ಹೆಚ್ಚಿರುವ ಕಾರಣ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

