ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು.
ಕಲಾ ಕ್ಷೇತ್ರದಲ್ಲಿ ಇವರು ನೀಡಿದ ಕೊಡುಗೆಗಳನ್ನು ಗುರುತಿಸಿ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ನಟ ಅನಂತ್ ನಾಗ್ ಅವರು ಸುಮಾರು ಐದು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಪ್ರಶಸ್ತಿ ಘೋಷಣೆಯಾಗಿದ್ದಾಗ ಈ ಪ್ರಶಸ್ತಿಯನ್ನು ಕನ್ನಡಿಗರಿಗೆ ಸಮರ್ಪಿಸುತ್ತೇನೆ ಎಂದು ಅವರು ಹೇಳಿದ್ದರು.

