ಮುಲ್ಕಿ: ದ.ಕ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇದೇ ಸಂದರ್ಭ ಕಾರಿನ ಮೇಲೆ ಭಾರೀ ಗಾತ್ರದ ಮರ ಬಿದ್ದು ಹಾನಿಯಾದ ಘಟನೆ ಮುಲ್ಕಿಯ ಪಳ್ಳಿಗುಡ್ಡೆ ಚಡಾವಿನಲ್ಲಿ ನಡೆದಿದೆ.
ಸುರತ್ಕಲ್ ನಿಂದ ಮುಲ್ಕಿ ವೆಂಕಟರಮಣ ದೇವಸ್ಥಾನಕ್ಕೆ ಹೋಗುತ್ತಿದ್ದ ಸಂದರ್ಭ ಏಕಾಏಕಿ ಕಾರಿನ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಸಹಿತ ಮೂವರು ಪಾರಾಗಿದ್ದಾರೆ.
ಮರ ಬಿದ್ದ ಪರಿಣಾಮ ಕಾರಿನ ಮೇಲ್ಭಾಗ ಸಂಪೂರ್ಣ ಜಖಂಗೊಂಡಿದೆ. ಬಳಿಕ ಮರವನ್ನು ತೆರವುಗೊಳಿಸಲಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

