ಮಂಗಳೂರು: ದ.ಕ ಜಿಲ್ಲೆಯಲ್ಲಿ ಅನೇಕ ದಿನಗಳಿಂದಲೂ ಕೋಮು ಸಂಘರ್ಷ ಘಟನೆಗಳು ನಡೆಯುತ್ತಲೇ ಇದೆ. ಕೋಮುಸೌಹಾರ್ದತೆಗೆ ಹೆಸರಾದ ಕರಾವಳಿಯಲ್ಲಿ ಧರ್ಮದ ಹೆಸರಿನಲ್ಲಿ ನೆತ್ತರ ಕೋಡಿ ಹರಿಯುತ್ತಿರೋದು ವಿಪರ್ಯಾಸ. ಜಿಲ್ಲೆಯಲ್ಲಿ ನಡೆಯುತ್ತಿರುವ ಮತೀಯ ಕೊಲೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಪ್ರಕ್ರಿಯೆಗಳು ಶುರುವಾಗಿದೆ.
ದ.ಕ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ, ಮಾಜಿ ಮೇಯರ್ ಕೆ.ಅಶ್ರಫ್ ಅವರು ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಸಭೆಯೊಂದನ್ನು ಕರೆದಿದ್ದು ಈಗಾಗಲೇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಾಲಿ ಸರ್ಕಾರ ವಿಫಲವಾದ ಕಾರಣ ಸರ್ಕಾರಕ್ಕೆ ಬುದ್ಧಿ ಕಲಿಸಲು ಈ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಕೆ.ಅಶ್ರಫ್ ಅವರು ತಿಳಿಸಿದ್ದಾರೆ.

