ಬೆಂಗಳೂರು: ದ.ಕ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋಮು ದ್ವೇಷ ಪ್ರಕರಣಗಳು, ಹತ್ಯಾ ಪ್ರಕರಣಗಳು ನಡೆಯುತ್ತಲೇ ಇದೆ. ಹಿಂದೂ ಯುವಕರ ಹತ್ಯೆ, ಮುಸ್ಲಿಂ ಯುವಕರ ಹತ್ಯೆ ಹೀಗೆ ಸಾಲು ಸಾಲು ಹಲ್ಲೆಗಳು ನಡೆಯುತ್ತಿದೆ. ಸರ್ಕಾರ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿದೆ.
ಕೊನೆಗೂ ಮಂಗಳೂರು ಕೋಮು ಸಂಘರ್ಷದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಗೃಹ ಇಲಾಖೆಯಿಂದ ವಿಶೇಷ ಕಾರ್ಯಪಡೆ ರಚನೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಗಲಭೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಪ್ಲ್ಯಾನ್ ಮಾಡಲಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಂಗಳೂರು ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಪ್ರತೀ ಬಾರಿ ಈ ರೀತಿ ಆದ್ರೆ ಕಣ್ಣು ಮುಚ್ಚಿ ಕೂರೋಕೆ ಆಗಲ್ಲ. ಸದ್ಯದಲ್ಲೇ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಹೇಳಿದರು.

