ಕಾಸರಗೋಡು: ಸ್ವಲ್ಪವೂ ಎಡೆಬಿಡದೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇತಿಹಾಸ ಪ್ರಸಿದ್ಧ ಮಧೂರು ಸಿದ್ದಿವಿನಾಯಕ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ.
ದೇಗುಲದ ಪ್ರಾಂಗಣದೊಳಗೆ ಮಳೆ ನೀರು ಸಂಪೂರ್ಣವಾಗಿ ತುಂಬಿಕೊಂಡಿದ್ದು ಸುಮಾರು ಒಂದು ಅಡಿಗೂ ಹೆಚ್ಚು ನೀರು ತುಂಬಿಕೊಂಡಿದೆ. ತಗ್ಗು ಪ್ರದೇಶದಲ್ಲಿ ನೀರು ತುಂಬಿಕೊಂಡಿದೆ.
ಪ್ರತೀ ಬಾರಿ ಮಳೆಗಾಲದಲ್ಲಿ ದೇಗುಲ ಸಂಪೂರ್ಣವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ಸಾರಿಗೆ ವ್ಯವಸ್ಥೆಗಳು ಅಸ್ತವ್ಯಸ್ತಗೊಂಡಿದೆ.

