ಕಾಪು: ಮನೆಯಲ್ಲಿ ಒಂಟಿಯಾಗಿ ವಾಸವಿದ್ದ ಅವಿವಾಹಿತ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಾಪುವಿನ ಮಟ್ಟುವಿನಲ್ಲಿ ನಡೆದಿದೆ. ಮಟ್ಟು ಗ್ರಾಮದ ಐವತ್ತೇಳು ವರ್ಷದ ಜಯ ಎಂಬಾತ ಮೃತಪಟ್ಟ ದುರ್ದೈವಿ.
ವಿಪರೀತವಾಗಿ ಮದ್ಯ ಸೇವನೆ ಮಾಡುತ್ತಿದ್ದ ಜಯ ಅವರು ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು. ನಶೆಯೇರಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
ಭಾಸ್ಕರ್ ಎಂಬವರು ನೀಡಿದ ದೂರಿನಂತೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

