ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ಶೀತ ವಾತಾವರಣ ಇರುವುದರಿಂದ ದಟ್ಟವಾಗಿ ಹಬ್ಬಿದ್ದ ಮಂಜಿನ ಹಿನ್ನೆಲೆ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ರಸ್ತೆ ಸ್ಪಷ್ಟವಾಗಿ ಕಾಣದೆ ಅಲ್ಲಿ ಅನೇಕ ರಸ್ತೆ ಅಪಘಾತಗಳು ಸಂಭವಿಸುತ್ತಿರುತ್ತದೆ. ಪ್ರಯಾಣಿಕರು ಎಚ್ಚರಿಕೆಯಿಂದ ಪ್ರಯಾಣಿಸಬೇಕು.
ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನ ಪಲ್ಟಿಯಾಗಿದ್ದು ಚಾಲಕನಿಗೆ ಗಂಭೀರ ಗಾಯಗಳಾಗಿದೆ. ತಕ್ಷಣವೇ ಆಸ್ಪತ್ರೆಗೆ ಸಾಗಿಸಿದ್ದಾರೆ.

