ಸಾಲು ಸಾಲು ಕೊಲೆಗಳಿಂದ ಕಂಗೆಟ್ಟಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದ್ದುಬಸ್ತಿನಲ್ಲಿಡಲು ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.
ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಮಹೇಶ್ ಶೆಟ್ಟಿ ತಿಮರೊಡಿ ಸೇರಿ 36 ಜನರ ಗಡಿಪಾರಿಗೆ ಪೊಲೀಸ್ ಇಲಾಖೆ ಪ್ರಕ್ರಿಯೆ ಆರಂಭಿಸಿದೆ.

ಈಗಾಗಲೇ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ 15 ಮಂದಿ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದು, ಜೊತೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕಲಬುರಗಿಯ ಶಹಾಬಾದ್ಗೆ ಗಡಿಪಾರು ಮಾಡುವ ಬಗ್ಗೆ ನೋಟಿಸ್ ನೀಡಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ಜೊತೆಗೆ ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಸಹಿತ 36 ಮಂದಿಯನ್ನು ಗಡಿಪಾರು ಮಾಡುವ ಕುರಿತು ಪೊಲೀಸ್ ಇಲಾಖೆ ಕಾನೂನು ಪ್ರಕ್ರಿಯೆ ಆರಂಭಿಸಿದೆ ಎನ್ನಲಾಗಿದೆ.
ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಆರೋಪ ಹೊತ್ತಿರುವ ಒಟ್ಟು 36 ವ್ಯಕ್ತಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡು ಕಾನೂನು ಪ್ರಕ್ರಿಯೆ ಆರಂಭ ಮಾಡಿರುವುದಾಗಿ ಇಲಾಖೆ ಅಧಿಕೃತವಾಗಿ ಪ್ರಕಟ ಮಾಡಿದೆ.

