ಕುಂದಾಪುರ: ಕುಂದಾಪುರದ ಸಿದ್ಧಾಪುರ, ಹೊಸಂಗಡಿಯಲ್ಲಿ ಕಾಡಾನೆಯೊಂದು ದಾಂಗುಡಿ ಇಟ್ಟಿದ್ದು ಕಳೆದ ಎರಡು ದಿನಗಳಿಂದ ಸಾರ್ವಜನಿಕ ಪ್ರದೇಶದಲ್ಲಿ ಓಡಾಡುತ್ತಿದೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದು ಆತಂಕ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಇಂದು ರಜೆ ಘೊಷಣೆ ಮಾಡಲಾಗಿದೆ.
ಸಿದ್ಧಾಪುರ, ಹೊಸಂಗಡಿ, ಕಮಲಶಿಲೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿದ್ಧಾಪುರದ ಸಂತೆಯನ್ನೂ ರದ್ದುಗೊಳಿಸಲಾಗಿದೆ.
ಈಗಾಗಲೇ ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ವನ್ಯಜೀವಿ ವಲಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಸಾರ್ವಜನಿಕರು ಭಯಭೀತರಾಗದೆ ಮುಂಜಾಗ್ರತಾ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ.

