ಮಂಗಳೂರು: ಮಂಗಳೂರು ಹೊರವಲಯದ ಬಜ್ಪೆಯಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಮಂಗಳೂರಿಗರನ್ನೇ ಬೆಚ್ಚಿ ಬೀಳಿಸಿತ್ತು. ನಂತರ ಧರ್ಮದ ವಿಚಾರದಲ್ಲಿ ಕಚ್ಚಾಡುತ್ತಾ ಕೊಲೆ, ಪ್ರತಿಕೊಲೆಗಳು ನಡೆಯಿತು. ಇದೀಗ ಈ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ.
ಬಜ್ಪೆಯ ಶಾಂತಿಗುಡ್ಡೆ ನಿವಾಸಿ, ಐವತ್ತೊಂಭತ್ತು ವರ್ಷದ ಅಬ್ದುಲ್ ರಜಾಕ್ ಬಂಧಿತ ಆರೋಪಿಯಾಗಿದ್ದಾನೆ. ಈತ ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮಿಲ್ ನ ತಂದೆ. ಮಂಗಳೂರು ಸಿಸಿಬಿ ಪೊಲೀಸರು ಈತನನ್ನು ಅರೆಸ್ಟ್ ಮಾಡಿದ್ದಾರೆ.
ಅಳಿಯ ಮತ್ತು ಮಗನೊಂದಿಗೆ ಸೇರಿ ಈತನೂ ಸುಹಾಸ್ ಕೊಲೆಗೆ ಸ್ಕೆಚ್ ಹಾಕಿದ್ದು ಪ್ರಕರಣದಲ್ಲಿ ಶಾಮೀಲಾಗಿದ್ದಾನೆ. ತನಿಖೆ ಮುಂದುವರೆಯುತ್ತಿದ್ದು ಉಳಿದ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ.


