ಹದಿನೆಂಟು ವರ್ಷಗಳ ಬಳಿಕ ಐಪಿಎಲ್ ಕಪ್ ಗೆದ್ದ ಖುಷಿಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಸಂಭ್ರಮೋತ್ಸವದ ಕಾರ್ಯಕ್ರಮಕ್ಕೂ ಮೊದಲು ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಜನ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಹಿರಿಯ ಪೊಲೀಸ್ ಅಧಿಕಾರಿಗಳ ತಲೆದಂಡವಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಸೇರಿ ಐವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಾಗಿದ್ದು ನಿವೃತ್ತ ನ್ಯಾ.ಮೂ. ಮೈಕಲ್ ಡಿ ಕುನ್ಹಾ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದೆ.
ಪ್ರಕರಣದಲ್ಲಿ ಈಗಾಗಲೇ ಎರಡು ಎಫ್ ಐ ಆರ್ ದಾಖಲಾಗಿದ್ದು, ತಪ್ಪಿತಸ್ಥರನ್ನು ಬಂಧಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


