ಉಡುಪಿ: ಸೈಲಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಎರಡು ದಿನದ ಓರಿಯೆಂಟೇಶನ್ ಕಾರ್ಯಕ್ರಮ ಸೋಮವಾರ ಮತ್ತು ಮಂಗಳವಾರ ನಡೆಯಿತು.

ಎರಡು ದಿನದ ಕಾರ್ಯಗಾರ ವನ್ನು ಉದ್ಘಾಟಿಸಿದ ಸಂಸ್ಥೆಯ ಟ್ರಸ್ಟಿ ಶಾರ್ಲೆಟ್ ಮಾಬೆನ್ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಕಾಲೇಜಿನ ರೂಲ್ಸ್ ಅಂಡ್ ರೆಗುಲೇಶನ್, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಬಗ್ಗೆ ಮಾಹಿತಿ, ವೃತ್ತಿ ಮಾರ್ಗದರ್ಶನ ಹಾಗೂ ಕಾಲೇಜಿನಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾತನಾಡಿದರು.
ಪ್ರಿನ್ಸಿಪಾಲ್ ಡಾ. ಜಾರ್ಜ್ ಕಾಲೇಜಿನ ಪರಿಚಯ ಮಾಡಿದರು. ವಿದ್ಯಾರ್ಥಿಗಳ ಬೌದ್ಧಿಕ ವಿಕಾಸನಕ್ಕೆ ಪೂರಕವಾದ ಶಿಕ್ಷಣವನ್ನು ಸೈಲ ಸ್ ಪದವಿ ಪೂರ್ವ ಕಾಲೇಜು ನೀಡುತ್ತಿದೆ ಎಂದರು.
ಬಳಿಕ ನೂತನ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.


