ಮಂಗಳೂರು: ಬಕ್ರೀದ್ ಸಮೀಪಿಸುತ್ತಿರುವ ಈ ಸಂದರ್ಭ ಗೋವುಗಳ ಅಕ್ರಮ ಸಾಗಾಟ, ಗೋಹತ್ಯೆಯಂತಹ ದುಷ್ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಾಂತ ಗೋರಕ್ಷಾ ಪ್ರಮುಖ್ ಸುನಿಲ್ ಕೆ.ಆರ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾತನಾಡಿದ ಅವರು ಗೋವುಗಳ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಾಗಿದೆ. ಕಾಯಿದೆಯಂತೆ ಜಾನುವಾರು ಹತ್ಯೆ ತಡೆಯುವ ಅಧಿಕಾರ ನಮಗೂ ಇದೆ. ಅದಕ್ಕೆ ಅವಕಾಶ ನೀಡಿ ಎಂದು ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ನೂತನ ಪೊಲೀಸ್ ಕಮಿಷನರ್ ಅಧಿಕಾರಕ್ಕೆ ಬಂದ ದಿನವೇ ಇಪ್ಪತ್ನಾಲ್ಕು ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಇದು ಉತ್ತಮ ಕಾರ್ಯ ಎಂದು ಪೊಲೀಸರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.

