ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್ ಸಿಬಿ ಸಂಭ್ರಮಾಚರಣೆಯ ಕಾಲ್ತುಳಿತ ದುರಂತ ಪ್ರಕರಣ ರಾಷ್ಟ್ರಮಟ್ಟದಲ್ಲೇ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ಕಮಿಷನರ್ ದಯಾನಂದ್ ಸಹಿತ ಇತರ ಕೆಲವು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಈ ಬೆನ್ನಲ್ಲೇ ಇದೀಗ ಆರ್ ಸಿಬಿ ಮ್ಯಾನೇಜ್ಮೆಂಟ್ ನ ಆಯೋಜಕರಿಗೂ ಬಂಧನದ ಬಿಸಿ ಮುಟ್ಟಿದೆ.
ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಮೂವರು ಆಯೋಜಕರ ಮೇಲೆ ಪೊಲೀಸರು ಬಲೆ ಬೀಸಿದ್ದಾರೆ. ಮುಂಬೈಗೆ ತೆರಳುತ್ತಿದ್ದ ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ, ಡಿಎನ್ಎ ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಬಂಧಿತರು.
ಇನ್ನು ನಿನ್ನೆ ರಾತ್ರಿ ಕೆಎಸ್ಸಿಎ ಕಾರ್ಯದರ್ಶಿ ಶಂಕರ್ ಅವರ ಮನೆ ಮೇಲೆ ಕೂಡಾ ದಾಳಿ ನಡೆದಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

