ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಕಮಿಷನರ್ ಆಗಿದ್ದವರು ಸೀಮಂತ್ ಕುಮಾರ್ ಸಿಂಗ್. ಇವರು ದ.ಕ ಜಿಲ್ಲಾ ಎಸ್ಪಿ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.
ದಯಾನಂದ್ ಅವರ ಸ್ಥಾನಕ್ಕೆ ಇವರನ್ನು ವರ್ಗಾವಣೆ ಮಾಡಲಾಗಿದೆ. ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರ ಹಲವು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ.

