ಉಡುಪಿ: ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರನ್ನು ಎಸ್ಐಓ ವಿದ್ಯಾರ್ಥಿ ಸಂಘಟನೆ ವತಿಯಿಂದ ಭೇಟಿ ಮಾಡಿ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು.
ಈ ಸಂದರ್ಭ ಯುವಜನತೆ ಮಾದಕ ವ್ಯಸನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಬಲಿಯಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕು. ಕರಾವಳಿಯಲ್ಲಿ ಕೋಮುಪ್ರಚೋದಿತ ಕೃತ್ಯಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಈ ವಿದ್ಯಾರ್ಥಿ ಸಂಘಟನೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಪರಿಚಯಿಸಲಾಯಿತು.

