ಬೆಂಗಳೂರು: ತನ್ನ ಸಿನಿಮಾ ರಿಲೀಸ್ ದಿನವೇ ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಇಂದು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.
ಜೈಲಿನಿಂದ ರಿಲೀಸ್ ಆದ ಕೂಡಲೇ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಕಿಡಿಗೇಡಿಗಳು ನನ್ನ ಮೂರು ವರ್ಷದ ಶ್ರಮವನ್ನು ಹಾಳು ಮಾಡಿದ್ದಾರೆ. ಶಿವಣ್ಣ, ದರ್ಶನ್, ಧ್ರುವ ಸರ್ಜಾ ಬಗ್ಗೆ ಮಾತನಾಡಿರುವ ಆಡಿಯೋ ನನ್ನದಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕೇಸಿನಲ್ಲಿ ನಾನು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ. ಕಾನೂನಿನ ಮೇಲೆ ನನಗೆ ನಂಬಿಕೆ ಇದೆ ಎಂದು ಹೇಳಿಕೆ ನೀಡಿದ್ದಾರೆ.

