ಉಡುಪಿ: ಲಾಡ್ಜ್ ವೊಂದರಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿ, ಮಹಿಳೆಯರನ್ನು ರಕ್ಷಿಸಿದ ಘಟನೆ ಉಡುಪಿ ಬಡಗಬೆಟ್ಟುವಿನ ದಶರಥನಗರದಲ್ಲಿ ನಡೆದಿದೆ.
ಬಿಹಾರದ ಚುಮಾನ್ ರಾಮ್ ಎಂಬಾತ ಬಂಧಿತ ಆರೋಪಿ. ಪೊಲೀಸರು ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತ ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ.
ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಲಾಡ್ಜ್ ಗೆ ಭೇಟಿ ನೀಡಿ ಮಹಿಳೆಯರನ್ನು ರಕ್ಷಿಸಿ ಈತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

