ಬೈಂದೂರು: ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ಸರ್ಕಲ್ ಬಳಿ ಇರುವ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುವ ದಲಿತ ಯುವತಿಯ ಮೇಲೆ ಮುಸ್ಲಿಂ ಮಹಿಳೆ ಚಿಲ್ಲರೆ ವಿಷಯಕ್ಕೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ತಕ್ಷಣ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸಿ ಘಟನೆ ನಡೆದ 24 ಗಂಟೆಯೊಳಗೆ ಆರೋಪಿ ಯಾಸ್ಮಿನ್ ನನ್ನು ಪತ್ತೆ ಹಚ್ಚಿ ಹೆಡೆ ಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಮಹಿಳೆಯನ್ನು ಮುಸ್ಲಿo ಸಮುದಾಯದ ಯಾಸ್ಮಿನ್ ಎಂದು ಗುರುತಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿ ರಾಮ್ ಶಂಕರ್ ಹಾಗೂ ಕುಂದಾಪುರ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಕಂಡ್ಲೂರು ಪೊಲೀಸ್ ಠಾಣಾಧಿಕಾರಿ ಮತ್ತು ಸಿಬ್ಬಂದಿಗಳ ಸಹಕಾರದಿಂದ ಆರೋಪಿಯನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪೊಲೀಸರ ಕಾರ್ಯಾಚರಣೆಗೆ ದಲಿತ ಸಮುದಾಯದ ಮುಖಂಡರಿಂದ ಹಾಗೂ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

