ಯುವಕನೊಬ್ಬ ಕುತ್ತಿಗೆ ಬೆಲ್ಟ್ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಮುಂಜಾನೆ ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದ ಪಾದಚಾರಿ ರಸ್ತೆಯಲ್ಲಿ ನಡೆದಿದೆ.
ಅರೆಬೆತ್ತಲೆ ಸ್ಥಿತಿಯಲ್ಲಿದ್ದ ಯುವಕ ತನ್ನ ಬೆಲ್ಟ್ ನಿಂದಲೇ ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಸಾರ್ವಜನಿಕರು ರಕ್ಷಿಸಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದ ಯುವಕನನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು, ಆಟೋ ಚಾಲಕರ ಸಹಕಾರದಿಂದ ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

