ಉಡುಪಿ: ಸಾರ್ವಜನಿಕ ಸ್ಥಳದಲ್ಲೇ ಪರವಾನಿಗೆ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಶಂಭುಲಿಂಗ ಮಡಿವಾಳ ಬಂಧಿತ ಆರೋಪಿ. ಈತ ನಗರದ ಹಳೇ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯ ಆಶಾ ಬಾರ್ ಸಮೀಪ ಮದ್ಯ ಸೇಲ್ ಮಾಡುತ್ತಿದ್ದ. ಈತ ಅಕ್ರಮವಾಗಿ ತನ್ನ ಸ್ವಂತ ಲಾಭಕ್ಕಾಗಿ ಈ ಕೃತ್ಯದಲ್ಲಿ ತೊಡಗಿದ್ದ ಎನ್ನಲಾಗಿದೆ.
ಆರೋಪಿಯಿಂದ ವಿವಿಧ ಬ್ರ್ಯಾಂಡ್ ನ ಮದ್ಯ ಸೇರಿ ಆತನಲ್ಲಿದ್ದ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಆತನನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

