ಉಡುಪಿ : ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಸವಿತಾ ಸಮಾಜ ಮತ್ತು ಅದರ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu. karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್ಸೈಟ್ https://www. kaushalkar.com/ ನಲ್ಲಿ ಆನ್ಲೈನ್ ಮೂಲಕ ಜೂನ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www. kssd.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ ದೂ.ಸಂಖ್ಯೆ: 0820-2574882 ಸಂಪರ್ಕಿಸ ಬಹುದಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

