ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಯೋಜನೆಗಳಡಿ ಈ ಸಾಲಿನ ಸಹಾಯಧನವನ್ನು ನೀಡಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಖಾಯಂ ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು. ವಿಶ್ವಕರ್ಮ ಸಮುದಾಯದವರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಜಾತಿ ಆದಾಯ ಪ್ರಮಾಣ ಪತ್ರ ಕಡ್ಡಾಯ. ವಯಸ್ಸು ಹದಿನೆಂಟು ವರ್ಷದಿಂದ ಐವತ್ತೈದು ವರ್ಷದ ಮಿತಿಯಲ್ಲಿರಬೇಕು.
ಕುಟುಂಬದ ಒಬ್ಬರಿಗೆ ಮಾತ್ರ ಈ ಸೌಲಭ್ಯ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಜುಲೈ ೨ ಕೊನೆಯ ದಿನವಾಗಿದ್ದು ಕರ್ನಾಟಕ ವನ್, ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.

