ಮಂಗಳೂರು: ಭಾರೀ ಮಳೆಯ ಪರಿಣಾಮ ಅನೇಕ ಕಡೆ ನಾನಾ ಅವಾಂತರಗಳು ಸೃಷ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ೧೬೯ರಲ್ಲಿ ಗುಡ್ಡ ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ನೆಮ್ಮಾರು ಗ್ರಾಮದಲ್ಲಿ ನಡೆದಿದೆ.
ಕರಾವಳಿ ಮಾತ್ರವಲ್ಲದೆ ಮಲೆನಾಡಲ್ಲೂ ಭಾರೀ ಮಳೆ ಮುಂದುವರಿದಿದೆ. ಗುಡ್ಡ ಕುಸಿತ ಕಂಡುಬಂದಿರುವ ಕಾರಣ ಶೃಂಗೇರಿ ಮಂಗಳೂರು ಮಾರ್ಗದ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಈ ಹಿನ್ನೆಲೆ ಮಂಗಳೂರಿಗೆ ತೆರಳುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಪೊಲೀಸರು ಸೂಚನೆ ನೀಡಿದ್ದಾರೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಣ್ಣು ತೆರವು ಕಾರ್ಯ ಕೂಡಾ ವಿಳಂಬಗೊಳ್ಳುತ್ತಿದೆ.

