ಉಡುಪಿ: ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಅಲ್ಲಲ್ಲಿ ಅನೇಕ ಅವಾಂತರಗಳು ಸೃಷ್ಟಿಯಾಗಿದೆ. ಭಾರೀ ಮಳೆಯ ಹಿನ್ನೆಲೆ ನಾಳೆ ಜೂ.16 ಉಡುಪಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಅಲ್ಲಲ್ಲಿ ನೆರೆ ಪ್ರವಾಸದ ಭೀತಿ ಕೂಡಾ ಎದುರಾಗಿದೆ. ಮೂರು ದಿನಗಳವರೆಗೆ ವರುಣನ ಅಬ್ಬರ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉಡುಪಿ, ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು ಮಳೆಯ ಸಂದರ್ಭ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.


