ಕಾಪು: ಇನ್ನೂ ಮದುವೆಯಾಗದ ಕಾರಣಕ್ಕೆ ಖಿನ್ನತೆಗೊಳಗಾಗಿ ಮನೆಯಲ್ಲೇ ಅವಿವಾಹಿತನೋರ್ವ ನೇಣಿಗೆ ಶರಣಾದ ಘಟನೆ ಉದ್ಯಾವರದಲ್ಲಿ ನಡೆದಿದೆ. ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಮಧುಕರ ಮೃತ ದುರ್ದೈವಿ.
ಕಳೆದ ಎರಡು ದಿನಗಳಿಂದ ಮೀನುಗಾರಿಕೆಗೆ ರಜೆ ಇದ್ದ ಕಾರಣ ಇವರು ಮನೆಯಲ್ಲೇ ಇದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿ ಮಲಗುವ ಕೋಣೆಯ ಮರದ ಪಕ್ಕಾಸಿಗೆ ನೈಲಾನ್ ಹಗ್ಗ ಕಟ್ಟಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಮದುವೆಯಾಗದೆ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ತಾಯಿ ಸುಶೀಲಾ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

