ಮುಲ್ಕಿ: ಕಾರು ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಬಳಿ ನಡೆದಿದೆ.
ಅಪಘಾತದಿಂದ ಕಾರಿನ ಒಂದು ಬದಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

