ಬೆಳ್ತಂಗಡಿ: ಕರಾವಳಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಯುವಕರಿಬ್ಬರು ಸ್ಕೂಟರ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡಸದೃಶ ರೀತಿಯಲ್ಲಿ ಬದುಕುಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲ ಸಮೀಪ ನಡೆದಿದೆ.
ಪೇಲ ನಿವಾಸಿ ಸತೀಶ್ ಮತ್ತು ಸಹಸವಾರ ಸಂಜೀವ ಪೂಜಾರಿ ಅಪಾಯದಿಂದ ಪಾರಾದ ಯುವಕರಾಗಿದ್ದಾರೆ. ಇವರು ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭ ಹರಿಯುತ್ತಿರುವ ನೀರಿನ ಸಮೀಪ ಸ್ಕೂಟರ್ ಸಮೇತ ದಾಟುತ್ತಿದ್ದರು.
ಆದರೆ ಕೈಗೆ ಸಿಕ್ಕ ಯಾವುದೋ ಬಳ್ಳಿಯ ಸಮೇತ ಸಿನಿಮೀಯ ರೀತಿಯಲ್ಲಿ ಬದುಕುಳಿದಿದ್ದಾರೆ ಎನ್ನಲಾಗಿದೆ.

