ಉಡುಪಿ: ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಇಡಲಾಗಿದೆ ಎಂದು ಇಮೇಲ್ ನಲ್ಲಿ ಬೆದರಿಕೆ ಹಾಕಿದಂತಹ ಆತಂಕಕಾರಿ ಘಟನೆ ನಡೆದಿದೆ.
ಇಮೇಲ್ ನಲ್ಲಿ ಈ ರೀತಿಯ ಸಂದೇಶ ನೋಡಿದ ತಕ್ಷಣ ಪೊಲೀಸರಿಗೆ ವಿಷಯ ತಿಳಿಸಲಾಗಿದ್ದು ಕೂಡಲೇ ಪೊಲೀಸರು ವಿದ್ಯಾಸಂಸ್ಥೆಯನ್ನು ಸುಪರ್ದಿಗೆ ಪಡೆದಿದ್ದಾರೆ. ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಿದ್ದಾರೆ.
ಆದರೆ ಯಾವುದೇ ರೀತಿಯ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ಇಡೀ ಶಾಲೆಯನ್ನು ಪರಿಶೀಲಿಸಿ ಆಡಳಿತ ಮಂಡಳಿಗೆ ಬಿಟ್ಟು ಕೊಡಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

