ರಾಜ್ಯ ಸರ್ಕಾರವು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಇದರ ಫಲಾನುಭವಿಗಳಾಗಬಹುದು.
ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರೆಸಲು ಸಹಾಯವಾಗುವ ನಿಟ್ಟಿನಲ್ಲಿ ವಿದ್ಯಾಭ್ಯಾಸದಿಂದ ವಂಚಿತರಾಗದಂತೆ ತಡೆಯಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಒಂದನೇ ತರಗತಿಯಿಂದ ಹತ್ತನೇ ತರಗತಿಯ ಮಕ್ಕಳಿಗಾಗಿ ಸರ್ಕಾರ ವಿದ್ಯಾರ್ಥಿ ವೇತನ ನೀಡುತ್ತಿದೆ.
ಆಧಾರ್ ಕಾರ್ಡ್, ಮೊಬೈಲ್ ನಂಬರ್, ಇಮೇಲ್ ಐಡಿ, ಪಾಸ್ಬುಕ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಇತರ ದಾಖಲೆಯ ಮೂಲಕ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.


