ಕಾರ್ಕಳ: ನಿಂತಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು ಹಲವಾರು ಮಂದಿ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಕಾರ್ಕಳ ಹೆರ್ಮುಂಡೆ ನಿವಾಸಿ ಶಂಕರ್ ನಾರಾಯಣ ಭಟ್ ಮೃತ ದುರ್ದೈವಿ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ಸೊಂದು ಲಾವತ್ತಡ್ಕ ಎಂಬಲ್ಲಿ ನಿಂತಿದ್ದ ಹಿಟಾಚಿಗೆ ಬಂದು ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು ನಾರಾಯಣ್ ಭಟ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಧ್ಯೆಯೇ ಅಸುನೀಗಿದ್ದಾರೆ. ನೆಲ್ಯಾಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

