ಮಂಗಳೂರು: ಮನೆಯಲ್ಲಿ ತಂದೆ ಸೇದಿ ಎಸೆದ ಬೀಡಿಯ ತುಂಡನ್ನು ನುಂಗಿ ಹತ್ತು ತಿಂಗಳ ಮಗುವೊಂದು ಮೃತಪಟ್ಟ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಅಡ್ಯಾರಿನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಹತ್ತು ತಿಂಗಳ ಅನೀಶ್ ಕುಮಾರ್ ಮೃತ ಮಗು. ಶನಿವಾರ ಈ ದುರ್ಘಟನೆ ಸಂಭವಿಸಿದ್ದು ಅಸ್ವಸ್ಥಗೊಂಡ ಮಗುವನ್ನು ಆಸ್ಪತ್ರೆಗೆ ದಾಖಲಿದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಮನೆಯೊಳಗೆ ಬೀದಿ ಸೇದಿ ಎಸೆಯದಂತೆ ಪದೇ ಪದೇ ಗಂಡನಿಗೆ ಹೇಳಿದರೂ, ಪತಿಯ ನಿರ್ಲಕ್ಷ್ಯತನದಿಂದ ಈ ಘಟನೆ ನಡೆದಿದೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

