ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 1ರಂದು ಪತ್ರಿಕಾ ದಿನಾಚರಣೆ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ 2024- 25ನೇ ಸಾಲಿನ ಎಸ್ಎಸ್ಎಲ್.ಸಿ. ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಲಾಗಿದೆ.
ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ತಮ್ಮ ಮಕ್ಕಳ ಅಂಕ ಪಟ್ಟಿ, ಆಧಾರ್ ಕಾರ್ಡ್, ಸಂಘದ ಗುರುತಿನ ಚೀಟಿಯೊಂದಿಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಜೂ.28 ಕೊನೆಯ ದಿನಾಂಕ. ಹೆಚ್ಚಿನ ಮಾಹಿತಿಗಾಗಿ ಸಂಘದ ಪ್ರಧಾನ ಕಾರ್ಯದರ್ಶಿ (9448501020)ಯವರನ್ನು ಸಂಪರ್ಕಿಸಬಹುದು ಎಂದು ಸಂಘದ ಅಧ್ಯಕ್ಷ ಅಲೆವೂರು ರಾಜೇಶ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಕಟಣೆ ತಿಳಿಸಿದೆ.

