ಸಾಲಿಗ್ರಾಮ: ಇತ್ತೀಚೆಗೆ ಮಣಿಪಾಲದಲ್ಲಿ ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಕೆಎಂಸಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ಸಾಲಿಗ್ರಾಮ ನಿವಾಸಿ ಆಸ್ತಿಕ್ ಮೆಂಡನ್ ಮೃತ ದುರ್ದೈವಿ. ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದ ಪರಿಣಾಮ ಒಂದು ವಾರದಿಂದ ಇವರು ಕೋಮ ಸ್ಥಿತಿಯಲ್ಲಿದ್ದರು.
ಮಣಿಪಾಲದ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಇವರು ಹೆತ್ತವರು ಮತ್ತು ಸಹೋದರನನ್ನು ಅಗಲಿದ್ದಾರೆ. ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.

