ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಳೆಯ ಮಧ್ಯೆ ಆಗಾಗ ಬಿಸಿಲಿನ ವಾತಾವರಣ ಕಂಡುಬರುತ್ತಿತ್ತು. ಆದರೆ ಇದೀಗ ಮತ್ತೆ ವರುಣನಾರ್ಭಟ ಶುರುವಾಗಿದೆ. ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಂಭವವಿದ್ದು ಮಲೆನಾಡು ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ದ.ಕ, ಉಡುಪಿ ಭಾಗದಲ್ಲೂ ಬಹುತೇಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಹಲವೆಡೆ ಮುಂಗಾರು ಚುರುಕುಗೊಂಡಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

